ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆಯಲ್ಲಿ ಶಿಕ್ಷಕನಿಗೆ ಪೋಷಕರು ಸಖತ್ ಗೂಸಾ ಕೊಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಹೌದು ! ತರಗತಿ ಮುಗಿದ ನಂತರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕ ಲೋಕೇಶ್ ಹೊದಿಗೆರೆಗೆ ಗ್ರಾಮಸ್ಥರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
ಹಲವು ದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗುತ್ತಿದ್ದು, ಸದ್ಯ ಆ ಬಾಲಕಿ ಮನೆಗೆ ತೆರಳಿ ಕಾಮುಕ ಶಿಕ್ಷಕ ನೀಡುತ್ತಿರುವ ಕಿರುಕುಳದ ವಿಷಯವನ್ನು ಎಳೆ ಎಳೆಯಾಗಿ ಪೋಷಕರಿಗೆ ತಿಳಿಸಿದ ನಂತರ ಶಾಲೆಗೆ ಆಗಮಿಸಿದ ಪೋಷಕರು ಕಾಮುಕ ಶಿಕ್ಷಕನ ಬಟ್ಟೆ ಬಿಚ್ಚಿಸಿ ಧರ್ಮದೇಟು ಕೊಟ್ಟಿದ್ದಾರೆ.
ಶಾಲೆಯಲ್ಲೇ ಹಲ್ಲೆ ಮಾಡಲಾಗಿದ್ದು, ಅದೇ ವೇಳೆ ಸ್ಥಳಕ್ಕೆ ಚನ್ನಗಿರಿ ಬಿಇಒ ಮಂಜುನಾಥ್ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಬಳಿಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾದ ಶಿಕ್ಷಕ ಲೋಕೇಶ್'ನನ್ನು ಅಮಾನತಿಗೆ ಆದೇಶಿಸಿದ್ದಾರೆ. ಈ ಘಟನೆ ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
PublicNext
01/10/2022 02:31 pm