ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ಮುಂದೆ ವೈದ್ಯಕೀಯ ವಿದ್ಯಾರ್ಥಿಗಳಿಗೆ 3 ತಿಂಗಳ ಜಿಲ್ಲಾಸ್ಪತ್ರೆ ಸೇವೆ ಫಿಕ್ಸ್

ನವದೆಹಲಿ: ವೈದ್ಯಕೀಯ ವಿದ್ಯಾಬ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಮೂರು ತಿಂಗಳ ಜಿಲ್ಲಾಸ್ಪತ್ರೆಯಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ ಎಂದು ಭಾರತೀಯ ವೈದ್ಯಕೀಯ ಮಂಡಳಿ ಆದೇಶಿಸಿದೆ.

ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ(ಎಂಸಿಐ)ದ ಬೋರ್ಡ್ ಆಫ್ ಗವರ್ನರ್ಸ್ ಈ ನಿರ್ಧಾರ ತಳೆದಿದೆ.

ಯಾವುದೇ ವೈದ್ಯಕೀಯ ಕಾಲೇಜು ಅಥವಾ ಸಂಸ್ಥೆಗಳಲ್ಲಿ ಎಂಡಿ ಅಥವಾ ಎಂಎಸ್ ವ್ಯಾಸಂಗ ಮಾಡುತ್ತಿರುವ ಎಲ್ಲ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯವಾಗಿ ಅನ್ವಯಿಸಲಿದೆ.

Edited By : Nirmala Aralikatti
PublicNext

PublicNext

20/09/2020 07:24 pm

Cinque Terre

40.75 K

Cinque Terre

0