ಬೆಂಗಳೂರು : ರಾಜ್ಯದ 305 ಪರೀಕ್ಷಾ ಕೇಂದ್ರಗಳಲ್ಲಿ ನಡೆದಂತ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇದರ ಜೊತೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆಯಲ್ಲಿ ಹಾಜರಾದಂತ ವಿದ್ಯಾರ್ಥಿಗಳಿಗೆ ಉತ್ತರ ಪ್ರತಿಯ ಸ್ಕ್ಯಾನಿಂಗ್ ಪ್ರತಿ, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಆನ್ ಲೈನ್ ಮುಖಾಂತರ ಅರ್ಜಿಯ ಸಲ್ಲಿಸಲು ಸಮಯವನ್ನು ನಿಗಧಿಗೊಳಿಸಿದೆ.
ಇನ್ನೂ ಉತ್ತರ ಪ್ರತಿಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಕೆ ದಿನಾಂಕ ಇದೇ ತಿಂಗಳ 10 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.16 ಆಗಿರುತ್ತದೆ.
ಕಡ್ಡಾಯವಾಗಿ ಸ್ಕ್ಯಾನಿಂಗ್ ಪ್ರತಿ ತೆಗೆದುಕೊಂಡವರಿಗೆ ಮಾತ್ರವೇ ಮರು ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿಸಲ್ಲಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅವಕಾಶ ನೀಡಿದ್ದು, ಅರ್ಜಿ ಸಲ್ಲಿಕೆ ದಿನಾಂಕ ಅ.19ರಿಂದ ಆರಂಭಗೊಳ್ಳಲಿದೆ.
ದಿನಾಂಕ 23ರಂದು ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಪರೀಕ್ಷೆಯ ವಿದ್ಯಾರ್ಥಿಗಳು ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ ರೂ.530 ಶುಲ್ಕವನ್ನು ವಿಧಿಸಿದೆ.
ಮರು ಮೌಲ್ಯಮಾಪ ನಕ್ಕೆ ಪ್ರತಿ ವಿಷಯಕ್ಕೆ ರೂ.1670 ಶುಲ್ಕವನ್ನು ನಿಗಧಿಗೊಳಿಸಿದೆ. ಆದ್ರೇ ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕವಿರುವುದಿಲ್ಲ.
PublicNext
09/10/2020 04:57 pm