ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಸ್ಟ್ ಪಿಯು ಎಲ್ಲ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅ. 20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು.

ಪರೀಕ್ಷೆಯಲ್ಲಿ ಪಾಸ್ ಆಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಸಂಬಂಧ ಎಲ್ಲ ಉಪನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಹಾಗೂ ಜುಲೈ 13ಕ್ಕೂ ಮುನ್ನ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಿರುವ ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಬೇಕು.

ಉತ್ತೀರ್ಣಕ್ಕೆ ಅಗತ್ಯ ಅಂಕ ನೀಡಿ ದ್ವಿತೀಯ ಪಿಯು ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು.

ಈ ಫಲಿತಾಂಶಕ್ಕೆ ಜಿಲ್ಲಾ ಉಪನಿರ್ದೇಶಕರ ಅನುಮೋದನೆ ಪಡೆಯಬೇಕು ಎಂದು ಸೂಚಿಸಿದ್ದಾರೆ.

Edited By : Nirmala Aralikatti
PublicNext

PublicNext

10/10/2020 10:13 pm

Cinque Terre

91.06 K

Cinque Terre

0