ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊವೀಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಮೂರು ವಾರಗಳ ರಜೆ ಘೋಷಿಸಿ ಆದೇಶಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ಅಂದರೆ ಅ.30ರವೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ. ವಿದ್ಯಾಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಪೈಕಿ ಅನೇಕ ಮಂದಿಗೆ ಸೋಂಕು ದೃಢಪಟ್ಟಿದ್ದರಿಂದ ಕಾರ್ಯಕ್ರಮವನ್ನು ಇದಾಗಲೇ ಸ್ಥಗಿತಗೊಳಿಸಲಾಗಿದೆ. ಇದೀಗ ಎಲ್ಲಾ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಸಿಎಂ ಯಡಿಯೂರಪ್ಪ ಅವರು, ಹಲವಾರು ಶಿಕ್ಷಕರು ಸಹ ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ಅಂದರೆ ಅ.30ರವೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
PublicNext
11/10/2020 04:51 pm