ಬೆಂಗಳೂರು: ರಾಜ್ಯ ಸರ್ಕಾರವು ಈಗಾಗಲೇ ಶಾಲೆಗಳಿಗೆ ಅಕ್ಟೋಬರ್ 30ರವರೆಗೆ ಮಧ್ಯಂತರ ರಜೆಯನ್ನು ಘೋಷಣೆ ಮಾಡಿತ್ತು. ಇದೀಗ ರಾಜ್ಯದ ಪದವಿ ಪೂರ್ವ ಉಪನ್ಯಾಸಕರಿಗೂ ನವೆಂಬರ್ 1ರವರೆಗೆ ರಜೆಯನ್ನು ಘೋಷಿಸಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಟ್ವೀಟ್ ಮಾಡಿ, 'ಅಕ್ಟೋಬರ್10ರಿಂದ ನವೆಂಬರ್ 1ರವರೆಗೆ ಪದವಿಪೂರ್ವ ಶಿಕ್ಷಣ ಉಪನ್ಯಾಸಕರಿಗೆ ದಸರಾ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು, ಶಾಲೆಗಳಿಗೂ ರಜೆ ಘೋಷಿಸಿದಂತೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೂ ರಜೆ ಘೋಷಿಸಬೇಕು ಎಂದು ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೂ ರಜೆ ಘೋಷಣೆ ಮಾಡಿದೆ.
PublicNext
16/10/2020 09:48 pm