ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೆಂಬರ್ ನಲ್ಲಿ ಕಾಲೇಜು ಪುನಾರಂಭ ? : ಸುಳಿವು ಕೊಟ್ಟ ಡಿಸಿಎಂ ಅಶ್ವತ್ಥ ನಾರಾಯಣ್

ಬೆಂಗಳೂರು : ರಾಜ್ಯದಲ್ಲಿ ನವೆಂಬರ್ ನಲ್ಲಿ ಪಿಯು, ಡಿಗ್ರಿ ಕಾಲೇಜು ಆರಂಭಕ್ಕೆ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸುಳಿವು ನೀಡಿರುವ ಅವರು ನಮ್ಮ ಸರ್ಕಾರ ನೀಟ್, ಸಿಇಟಿ ಮತ್ತು ಇತರ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ.

ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕಾಲೇಜುಗಳ ಪುನಾರಂಭಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದರು.

ಕೇಂದ್ರ ಸರ್ಕಾರದ ಸೂಚನೆಯಂತೆ, ಶೀಘ್ರದಲ್ಲೇ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುತ್ತಿದ್ದು, ಆರಂಭಿಸಿದ ಕೂಡಲೇ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾಗಿ ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳಿಗೂ ನೇಮಕಾತಿ ಪತ್ರ ನೀಡಲಾಗುವುದು ಎಂದರು.

Edited By : Nirmala Aralikatti
PublicNext

PublicNext

18/10/2020 03:20 pm

Cinque Terre

63.43 K

Cinque Terre

11