ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂದು 100ನೇ ವಾರ್ಷಿಕ ಘಟಿಕೋತ್ಸವದ ಸಂಭ್ರಮ.
ಇನ್ಫೋಷಿಸ್ ಫೌಂಡೇಷನ್'ನ ಸುಧಾ ಮೂರ್ತಿ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ವಿವಿಯ ಕ್ರಾಫರ್ಡ್ ಹಾಲ್ ನಲ್ಲಿ ಸೋಮವಾರ ಆಯೋಜಿಸಿದ್ದ 100ನೇ ಘಟಿಕೋತ್ಸವದಲ್ಲಿ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಪ್ರದಾನ ಮಾಡುತ್ತಿರುವುದಾಗಿ ಹೇಳಿದ ಕುಲಪತಿಗಳು ಸಮಾಜ ಸೇವೆ, ಶಿಕ್ಷಣ, ಸಾಹಿತ್ಯ ಕ್ಷೇತ್ರಗಳಲ್ಲಿ ಸುಧಾಮೂರ್ತಿ ಅವರ ಸೇವೆಯನ್ನು ಸ್ಮರಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುತ್ತಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಘಟಿಕೋತ್ಸವ ಭಾಷಣ ನೆರವೇರಿಸಿದರು.
ಇನ್ನೂ ಪ್ರಧಾನಿಗಳು ಮೊದಲು ಕನ್ನಡದಲ್ಲಿಯೇ ಶುಭಾಷಯ ಕೋರಿದ ಪರಿ ಎಲ್ಲರ ಮೆಚ್ಚುಗೆಗೆ ಕಾರಣವಾಯಿತು.
PublicNext
19/10/2020 11:44 am