ದಾವಣಗೆರೆ: ಇಲ್ಲಿನ ದೇವರಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2020-21ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 15, 2020 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯನ್ನು ಏ.10, 2021 ರಂದು ಬೆಳಿಗ್ಗೆ 11.30 ಕ್ಕೆ ನಡೆಸಲಾಗುತ್ತದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ, ದಿನಾಂಕ 01-05-2008ರಿಂದ 30-04-2020 ರೊಳಗೆ ಜನಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://www.jnvdavanagere.gov.in/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇತರೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟ ನೀಡಬಹುದು ಎಂದು ಜವಾಹರ ನವೋಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
23/10/2020 11:37 pm