ಬೆಂಗಳೂರು-ಕೊರೊನಾ ಭೀತಿಯ ನಡುವೆ ಬಂದ್ ಆಗಿದ್ದ ಪದವಿ ಕಾಲೇಜುಗಳ ಪುನರಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಆದ್ರೆ ಸದ್ಯ ಪಿಯು ಕಾಲೇಜುಗಳು ಶುರುವಾಗೋದು ಯಾವಾಗ ಎಂಬ ಪ್ರಶ್ನೆಗೆ ಸರ್ಕಾರ ಸದ್ಯಕ್ಕಿಲ್ಲ ಎಂಬ ಉತ್ತರ ನೀಡಿದೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಪಿಯು ಕಾಲೇಜುಗಳ ಆರಂಭದ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಆದ್ರೆ ನವೆಂಬರ್ 17 ರಿಂದ ರಾಜ್ಯಾದ್ಯಂತ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳು ಪುನರಾರಂಭವಾಗಲಿದೆ.
PublicNext
24/10/2020 03:31 pm