ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ.17ರಿಂದ ಕಾಲೇಜು ಆರಂಭ ಡೌಟ್: ತಜ್ಞರ ಅಭಿಪ್ರಾಯ ಕೇಳುತ್ತೇವೆ ಎಂದ ಬಿಎಸ್‌ವೈ

ಶಿವಮೊಗ್ಗ: ಕೊರೊನಾ ಹಿನ್ನೆಲೆಯಲ್ಲಿ ಮುಚ್ಚಿದ್ದ ಕಾಲೇಜುಗಳ ಪುನಾರಂಭಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿಮಾಡಿತ್ತು. ಆದರೆ ಈಗ ಮತ್ತೆ ಕಾಲೇಜು ಪುನಾರಂಭವು ಮುಂದೂಡುವ ಸಾಧ್ಯತೆ ಎದುರಾಗಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಬಿಎಸ್.ಯಡಿಯೂರಪ್ಪ ಅವರು, 'ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳ ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು, ತಜ್ಞರ ಅಭಿಪ್ರಾಯ ಪಡೆಯಲಾಗುವುದು. ಅವರ ಮಾಹಿತಿ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ನೆರೆ ವಿಚಾರವಾಗಿ ಮಾತನಾಡಿದ ಸಿಎಂ, ರಾಜ್ಯಕ್ಕೆ ಎರಡು ಸಂಕಷ್ಟ ಬಂದಿದೆ. ಒಂದು ಕೊರೊನಾ ಸೋಂಕಿನ ಹಾವಳಿ, ಮತ್ತೊಂದು ಉತ್ತರ ಕರ್ನಾಟಕದ ನೆರೆ ಪರಿಹಾರವಾಗಿದೆ. ಎರಡನ್ನೂ ಸಮರ್ಪಕವಾಗಿ ನಿಭಾಯಿಸುತ್ತಿದ್ದೇವೆ ಎಂದು ತಿಳಿಸಿದರು.

Edited By : Vijay Kumar
PublicNext

PublicNext

25/10/2020 04:26 pm

Cinque Terre

35.72 K

Cinque Terre

1

ಸಂಬಂಧಿತ ಸುದ್ದಿ