ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲೆ ಪುನರಾರಂಭದ ಬಗ್ಗೆ ನಾಳೆಯಿಂದ ಸರಣಿ ಸಭೆ

ಬೆಂಗಳೂರು: ಕೊರೋನಾ ಸಂಕಷ್ಟದ ಸಮಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ, ಸರ್ಕಾರ ಮಾತ್ರ ಶಾಲೆ ಆರಂಭಿಸಲು ಚಿಂತನೆ ನಡೆಸುತ್ತಲೇ ಇದೆ. ಈಗ ನೆರೆಯ ರಾಜ್ಯಗಳಲ್ಲಿ ಶಾಲಾ-ಕಾಲೇಜು ಪುನರ್​ ಆರಂಭವಾಗಿರುವುದು ಇದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ. ಈ ಹಿನ್ನಲೆ ರಾಜ್ಯದಲ್ಲಿ ಕೂಡ ಶಾಲೆ ತೆರೆಯುವ ಕುರಿತು ಚಿಂತನೆ ನಡೆಸಲಾಗಿದೆ.

ಈ ಕುರಿತು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಲು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಮುಂದಾಗಿದ್ದಾರೆ. ಕಳೆದ ಅಕ್ಟೋಬರ್​ನಲ್ಲಿ ಶಾಲೆ ಪುನರ್​ ಆರಂಭ ಕುರಿತು ದಿನಾಂಕ ನಿಗದಿಗೊಳಿಸಲಾಗಿತ್ತು. ಸೋಂಕು ಹೆಚ್ಚಳ ಪ್ರಕರಣ ಜೊತೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆ ಈ ನಿರ್ಧಾರ ಕೈ ಬಿಡಲಾಗಿತ್ತು. ಈಗ ಮತ್ತೆ ಶಾಲೆ ತೆರೆಯುವ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಇಲಾಖೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ನಾಳೆ ಸಚಿವರು ಸಭೆ ನಡೆಸಲು ಮುಂದಾಗಿದ್ದಾರೆ. ನೆರೆಯ ಆಂಧ್ರದಲ್ಲಿ ಸೋಮವಾರದಿಂದ 9ನೇ ತರಗತಿಯಿಂದ 12ನೇ ತರಗತಿವರೆಗಿನ ಶಾಲೆಗಳ ಪುನರ್​ ಆರಂಭ ನಡೆಸಲಾಗಿದೆ. ಇದರಿಂದ ರಾಜ್ಯದಲ್ಲಿ ಕೂಡ ಶಾಲೆ ತೆರೆಯಲೇಬೇಕು ಎಂಬ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ.

ಈ ಹಿಂದೆ ಆದ ರೀತಿ ದಿನಾಂಕ ಪ್ರಕಟಿಸಿ ಮತ್ತೆ ಹಿಂದೆ ಸರಿಯುವುದು ಬೇಡ ಎಂದು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಈ ಕುರಿತು ಅಧಿಕಾರಿಗಳೊಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಸಭೆ ನಡೆಸಲಿದೆ. ಕಳೆದ 18ದಿನಗಳಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಕಾರಣ ಶಾಲೆ ಪುನರ್​ ಆರಂಭ ಕುರಿತು ತಜ್ಞರೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ.

Edited By : Nagaraj Tulugeri
PublicNext

PublicNext

03/11/2020 10:33 pm

Cinque Terre

67.21 K

Cinque Terre

5