ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪಘಾತಕ್ಕೀಡಾದ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತಕ್ಕಿಡಾಗಿ ಆಸ್ಪತ್ರೆ ಸೇರಿದ್ದ ವಿದ್ಯಾರ್ಥಿನಿಯ ಯೋಗಕ್ಷೇಮವನ್ನು ಸಚಿವ ಸುರೇಶ್ ಕುಮಾರ್ ವಿಚಾರಿಸಿದ್ದಾರೆ.

ಹೌದು ಕೆಂಗೇರಿ ಬಳಿ ರಸ್ತೆ ಅಪಘಾತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯನ್ನು ಭೇಟಿಯಾದ ಸಚಿವ ಎಸ್. ಸುರೇಶ್ ಕುಮಾರ್ ಆಕೆಯ ಆರೋಗ್ಯ ವಿಚಾರಿಸಿದರು.ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಯಶಸ್ವಿನಿಗೆ ಕತ್ತಿನ ಬೆನ್ನುಮೂಳೆಯ ಎರಡು ವರ್ಟೆಬ್ರಿಯಾಗಳು ತೀವ್ರವಾಗಿ ಘಾಸಿಗೊಳಾಗಿದ್ದು ಎರಡು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ. ವಿದ್ಯಾರ್ಥಿನಿಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಆಸ್ಪತ್ರೆಯ ನಿರ್ದೇಶಕರಿಗೆ ಸಚಿವರು ಮನವಿ ಮಾಡಿದರು.

ಆಸ್ಪತ್ರೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಕರೆಸಿದ ಸಚಿವರು, ವಿದ್ಯಾರ್ಥಿನಿಯ ಚಿಕಿತ್ಸೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತಕ್ಷಣವೇ ಒಂದು ಲಕ್ಷ ರೂ. ನೀಡಬೇಕೆಂದು ನಿರ್ದೇಶನ ನೀಡಿದರು.ಆಸ್ಪತ್ರೆಯಿಂದಲೇ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು, ಸದರಿ ವಿದ್ಯಾರ್ಥಿನಿಯ ತಂದೆ ಸೆಕ್ಯೂರಿಟಿ ನೌಕರಿ ಮಾಡುತ್ತಿದ್ದು, ತೀವ್ರ ಬಡತನದಲ್ಲಿರುವುದರಿಂದ ಇಲಾಖೆ ವತಿಯಿಂದಲೂ ಸಾಧ್ಯವಾದಷ್ಟು ನೆರವು ನೀಡಬೇಕೆಂದು ಕೋರಿದರು.

ಬಾಲಕಿಯನ್ನು ಮಾತನಾಡಿಸಿದ ಸುರೇಶ್ ಕುಮಾರ್, ಧೈರ್ಯವಾಗಿರು ಚಿಕಿತ್ಸೆ ಯಶಸ್ವಿಯಾಗಿ ನೀನು ಮೊದಲಿನಂತಾಗುತ್ತೀಯಾ, ನಿನ್ನ ಹೆಸರೇ ‘ಯಶಸ್ವಿನಿ’, ಚಿಕಿತ್ಸೆಯಲ್ಲಿ ಯಶಸ್ಸು ನಿನ್ನದಾಗುತ್ತದೆ. ಯಾವುದಕ್ಕೂ ಹೆದರ ಬೇಡ ಎಂದು ಧೈರ್ಯ ತುಂಬಿದರು. ಬಾಲಕಿಯ ಪಾಲಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಚಿವರು ಹೇಳಿದರು.

Edited By : Nirmala Aralikatti
PublicNext

PublicNext

01/02/2021 05:15 pm

Cinque Terre

84.29 K

Cinque Terre

14

ಸಂಬಂಧಿತ ಸುದ್ದಿ