ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲೆಯ ಸೀಲಿಂಗ್ ಕುಸಿದು ಐವರು ವಿದ್ಯಾರ್ಥಿಗಳು ಗಂಭೀರ

ಕಾರವಾರ: ಶಾಲೆಯ ಒಳಾಂಗಣದ ಸೀಲಿಂಗ್ ಕುಸಿದ ಪರಿಣಾಮ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ಪಟ್ಟಣದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಡೆದಿದೆ.

ನಾಲ್ಕನೇ ತರಗತಿ ವಿದ್ಯಾರ್ಥಿಗಳು ಇವರಾಗಿದ್ದು ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಂಕೋಲಾ ತಹಶೀಲ್ದಾರ್ ಹಾಗೂ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
PublicNext

PublicNext

09/03/2022 04:27 pm

Cinque Terre

49.48 K

Cinque Terre

7

ಸಂಬಂಧಿತ ಸುದ್ದಿ