ತುಮಕೂರು: ಎಸ್‌ಎಸ್‌ಎಸ್‌ಸಿ ಪರೀಕ್ಷೆ ಬರೆಯಲು ತ್ರಿಬಲ್ ರೈಡ್ ಹೋಗುತ್ತಿದ್ದ ವಿದ್ಯಾರ್ಥಿಗಳ ಬೈಕ್ ನಿಯಂತ್ರಣ ತಪ್ಪಿ ತಗ್ಗಿಗೆ ಬಿದ್ದಿದೆ. ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಜಿನ್ನಾಗರ ಗ್ರಾಮದ ಬಳಿ ನಡೆದಿದೆ.
ಹಾಲಗೆರೆ ಗ್ರಾಮದ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿ ನವೀನ್(16) ಸ್ಥಳದಲ್ಲೇ ಮೃತಟ್ಟುದ್ದಾನೆ. ಇನ್ನು ಬೈಕ್‌ನಲ್ಲಿದ್ದ ಶರತ್ ಹಾಗೂ ದರ್ಶನ್ ಎಂಬಾತರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂವರು ವಿದ್ಯಾರ್ಥಿಗಳು ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಅಮೃತೂರಿಗೆ ತೆರಳುತ್ತಿದ್ದರು. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
04/04/2022 06:25 pm