ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈ ಕೊರೆಯುವ ಚಳಿ : 7 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ನವದೆಹಲಿ : ಮನೆಯಲ್ಲಿದ್ದರು ತಾಳಲಾರದ ಚಳಿ ಇದರ ನಡುವೆ ಇಳಿವಯಸ್ಸಿನವರು ಸೇರಿದಂತೆ ಸಹಸ್ರಾರು ಜನ ಅನ್ನದಾತರು ಕಳೆದ ಏಳು ದಿನಗಳಿಂದ ರಸ್ತೆಯಲ್ಲಿಯೇ ದಿನಗಳಿಯುತ್ತಿದ್ದಾರೆ.

ಸರ್ಕಾರ ಯಾರ ಹಿತ ಕಾಪಡಬೇಕಿತ್ತೊ ಅವರ ನೋವಿಗೆ ಕಾರಣವಾಗಿರುವುದು ನಿಜಕ್ಕೂ ಖೇಧಕರ ಸಂಗತಿ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಸುಧಾರಣೆ ಕಾಯ್ದೆಗಳನ್ನು ರದ್ದುಪಡಿಸುವಂತೆ ಪಟ್ಟು ಹಿಡಿದು ರೈತರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ.

ಪ್ರತಿಭಟನಾ ನಿರತ ರೈತರೊಂದಿಗೆ ಕೇಂದ್ರ ಸರ್ಕಾರ ಈ ವರೆಗೂ ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲಗೊಂಡಿದ್ದು, ಗುರುವಾರ ಡಿ.3 ರಂದು ಮತ್ತೊಂದು ಸುತ್ತಿನ ಸಭೆ ನಡೆಸಲು ಮುಂದಾಗಿದೆ. ಈ ಸಭೆಗೆ ರೈತರ ಸಂಘಟನೆಗಳೂ ಒಪ್ಪಿಗೆ ನೀಡಿವೆ.

ಅದಕ್ಕೆ ರೈತ ಸಂಘಟನೆಗಳೂ ಒಪ್ಪಿಕೊಂಡಿವೆ. ಆದರೆ, ಕೃಷಿ ಸುಧಾರಣೆಗೆ ಸಂಬಂಧಿಸಿದ 3 ವಿವಾದಿತ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ತಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಪುನರುಚ್ಛಾರ ಮಾಡಿವೆ.

ಈ ನಡುವೆ ಇಂದೂ ಕೂಡ ರೈತರ ಸಂಘಟನೆಗಳು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ್ದು, ಪ್ರತಿಭಟನಾನಿರತ ರೈತರು ದೆಹಲಿ ಮತ್ತು ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿದ್ದಾರೆಂದು ತಿಳಿದುಬಂದಿದೆ.

ಪಶ್ಚಿಮ ಉತ್ತರಪ್ರದೇಶದ ವಿವಿಧ ಜಿಲ್ಲೆಗಳ ರೈತರು ದೆಹಲಿ-ನೊಯ್ಡಾ ಗಡಿ ಭಾಗದಲ್ಲಿ ಜಮಾಯಿಸಿದ್ದು, ದೆಹಲಿಯಲ್ಲಿ ಹರಿಯಾಣ-ಪಂಜಾಬ್ ರೈತರು ಆಂಭಿಸಲಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜಧಾನಿಯತದ್ತ ಹೊರಟಿದ್ದಾರೆ.

ಇದರಿಂದ ಉತ್ತರ ಪ್ರದೇಶವನ್ನು ರಾಷ್ಟ್ರ ರಾಜಧಾನಿಯೊಂದಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವನ್ನು ಮುಚ್ಚಲಾಗಿದೆ.

Edited By : Nirmala Aralikatti
PublicNext

PublicNext

02/12/2020 01:11 pm

Cinque Terre

52.36 K

Cinque Terre

1