ಬೆಂಗಳೂರು: ರಾಜ್ಯ ಸರ್ಕಾರವು ನವೆಂಬರ್ 17ರಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜು ತರಗತಿಗಳನ್ನು ಪುರಾಂಭಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ.
ಪ್ರಮಾಣಿತ ಕಾರ್ಯಚರಣಾ ವಿಧಾನ (ಎಸ್ಒಪಿ)ನಲ್ಲಿ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಕರಿಂದ ಒಪ್ಪಿಗೆ ಪತ್ರ ತರಬೇಕು. ಜೊತೆಗೆ ಕೊರೊನಾ ಟೆಸ್ಟ್ ರಿಪೋರ್ಟ್ ಪಡೆಯಬೇಕು. ಈ ಮೂಲಕ ವಿದ್ಯಾರ್ಥಿಗಳು ಕಾಲೇಜಿಗೆ ಎರಡೂ ಪತ್ರಗಳನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.
ಕಾಲೇಜು ಆರಂಭದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ನವೆಂಬರ್ 9ರಂದೇ ಎಸ್ಒಪಿ ಬಿಡುಗಡೆ ಮಾಡಿತ್ತು. ಅದರಂತೆ ಕಾಲೇಜುಗಳ ತರಗತಿ ಮತ್ತು ಶೌಚಗೃಹಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಇನ್ನೂ ವಿಶ್ವವಿದ್ಯಾಲಯಗಳಲ್ಲಿ ಹಾಸ್ಟೆಲ್ಗಳೂ ಇರುವುದರಿಂದ ಮೂರು ದಿನದ ಹಿಂದೆಯೇ ಸ್ಯಾನಿಟೈಸ್ ಕಾರ್ಯಕ್ಕೆ ಚಾಲನೆ ದೊರೆತಿದೆ.
PublicNext
16/11/2020 08:19 am