ಬೆಂಗಳೂರು: ಮಂಗಳವಾರದಿಂದ ರಾಜ್ಯಾದಂತ್ಯ ಕಾಲೇಜು ಪುನಾರಂಭಗೊಳ್ಳಲಿವೆ. ಈ ಬೆನ್ನಲ್ಲೇ ಶಾಲೆಗಳು ಕೂಡ ಓಪನ್ ಆಗಲಿವೆ ಎಂದು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
ಶಾಲೆಗಳ ಪುನಾರಂಭದ ಕುರಿತು ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ತರಗತಿಗೆ ಹಾಜರಾಗುವುದು ಕಡ್ಡಾಯವಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಿದರು.
ನಾಳೆಯಿಂದ ಕಾಲೇಜು ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳಿಗೆ ಹಾಜರಿ ಕಡ್ಡಾಯಗೊಳಿಸಿಲ್ಲ. ಕಾಲೇಜು ಆವರಣದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಸಚಿವರು ಹೇಳಿದರು.
PublicNext
16/11/2020 02:38 pm