ಬೆಂಗಳೂರು: ಡೆಡ್ಲಿ ಸೋಂಕು ಕೊರೊನಾ ವೈರಸ್ ಹಾವಳಿಯಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದೆ.
ಸದ್ಯಸೋಂಕಿನ ಸವಾಲಿನ ಮಧ್ಯೆಯೇ ಇಂದಿನಿಂದ ಕಾಲೇಜು ಪುನರಾರಂಭಗೊಂಡಿವೆ.
2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತವಾಗಿ ಇಂದಿನಿಂದಲೇ ಆರಂಭವಾಗಲಿದೆ.
ರಾಜ್ಯ ಸರಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ವಿ.ವಿ.ಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿವೆ.
ತರಗತಿ ಕೊಠಡಿಯ ಬೋಧನೆಯ ಜತೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಬೋಧನೆಗಳು ನಿರಂತರವಾಗಿರಲಿವೆ.
ಸುರಕ್ಷತಾ ಕ್ರಮವಾಗಿ ಕಾಲೇಜು ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ.
ವಿದ್ಯಾರ್ಥಿಗಳು ಕಾಲೇಜಿಗೆ ಬರಲೇಬೇಕು ಎಂಬ ಕಡ್ಡಾಯ ನಿಯಮವಿಲ್ಲ. ಹಾಗೆಯೇ ವಿದ್ಯಾರ್ಥಿಗಳು ಕಾಲೇಜಿಗೆ ಕಡ್ಡಾಯವಾಗಿ ಬರಬೇಕು ಎಂದು ಆಡಳಿತ ಮಂಡಳಿಗಳು ಒತ್ತಡ ಹೇರುವಂತಿಲ್ಲ.
ಆನ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆಯಲ್ಲೇ ಬೋಧನೆ ಮುಂದುವರಿಯಲಿವೆ.
ಕೋವಿಡ್ ಟೆಸ್ಟ್ ಕಡ್ಡಾಯ : ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗಟಿವ್ ವರದಿಯೊಂದಿಗೆ ಕಾಲೇಜಿಗೆ ಬರಬೇಕಿದೆ.
ಅದಲ್ಲದೆ ಪೋಷಕರ ಒಪ್ಪಿಗೆ ಪತ್ರವನ್ನು ತರಬೇಕಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿ ನಡೆಸಲು ಸರ್ಕಾರ ಸೂಚಿಸಿದೆ.
PublicNext
17/11/2020 08:05 am