ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಡಿಸೆಂಬರ್‌ ಅಂತ್ಯದವರೆಗೂ ಕರ್ನಾಟಕದಲ್ಲಿ ಶಾಲೆ ಆರಂಭ ಇಲ್ಲ: ಸಿಎಂ ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಡಿಸೆಂಬರ್‌ವರೆಗೆ ಶಾಲೆ ಇಲ್ಲ. ಡಿಸೆಂಬರ್ ಕೊನೆಯಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ತಜ್ಞರ ಅಭಿಪ್ರಾಯಗಳನ್ನು ಪಡೆಯಲಾಗಿದ್ದು, ಸದ್ಯಕ್ಕೆ ಶಾಲೆ ಪ್ರಾರಂಭ ಬೇಡ ಎಂದು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಪ್ರಾರಂಭ ಮಾಡಲಾಗುವುದಿಲ್ಲ ಎಂದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ.

ಸಭೆ ಪ್ರಾರಂಭದಲ್ಲಿ ಡಿಗ್ರಿ ಕಾಲೇಜುಗಳ ಬಗ್ಗೆ ಚರ್ಚೆ ನಡೆಯಿತು. ಎಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬರ್ತಿದ್ದಾರೆ. ಟೆಸ್ಟ್ ಮಾಡಿಸಿದಾಗ ಎಷ್ಟು ವಿದ್ಯಾರ್ಥಿಗಳಿಗೆ ಸೋಂಕು ಬಂದಿದೆ ಅನ್ನೋದ್ರ ಕುರಿತು ಚರ್ಚಿಸಲಾಯಿತು. ಇದೇ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ವರದಿಯನ್ನು ಸಚಿವ ಸುರೇಶ್ ಕುಮಾರ್ ಸಿಎಂಗೆ ಸಲ್ಲಿಕೆ ಮಾಡಿದರು. ಶಾಲೆ ಪ್ರಾರಂಭ ಕುರಿತು ವರದಿಯನ್ನು ಆಯುಕ್ತ ಅನ್ಬುಕುಮಾರ್ ರೆಡಿ ಮಾಡಿದ್ದರು. ಸಭೆಯಲ್ಲಿ ಈ ವರದಿ ಬಗ್ಗೆ ಚರ್ಚೆ ನಡೆಯಿತು.

ಡಿಸೆಂಬರ್ ಮುಕ್ತಾಯದ ವರೆಗೂ ಶಾಲೆ ಬೇಡ ಎಂದು ಸಚಿವ ಡಾ.ಸುಧಾಕರ್ ಸಚಿವ ಸುಧಾಕರ್ ಸಭೆಗೆ ತಮ್ಮ ಅಭಿಪ್ರಾಯ ತಿಳಿಸಿದರು. ಡಿಸೆಂಬರ್ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಇದು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಆಗುತ್ತಿದೆ. ಈಗಾಗಲೇ ಚಳಿಗಾಲ ಶುರುವಾಗ್ತಿದೆ. ತಜ್ಞರು ಕೂಡ ಡಿಸೆಂಬರ್ ವರೆಗೆ ಶಾಲೆ ಬೇಡ ಅಂದಿದ್ದಾರೆ. ಹೀಗಾಗಿ ಡಿಸೆಂಬರ್ ಕೊನೆಯವರೆಗೂ ಶಾಲಾ ಕಾಲೇಜು ಓಪನ್ ಮಾಡುವುದು ಸೂಕ್ತವಲ್ಲ ಎಂದು ಸುಧಾಕರ್ ತಿಳಿಸಿದರು.

Edited By : Raghavendra K G
PublicNext

PublicNext

23/11/2020 01:05 pm

Cinque Terre

64.53 K

Cinque Terre

7