ಬೆಳಗಾವಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸರ್ಕಾರಿ ಶಾಲೆಗಳ ಅಭಿವೃದ್ದಿಗಾಗಿ ಸರ್ಕಾರದೊಂದಿಗೆ ಕೈ ಜೋಡಿಸಿದ್ದಾರೆ. ಮುಧೋಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ 5 ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಇಂದು ಆಯೋಜಿಸಲಾಗಿದ್ದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಸಮಾರಂಭವನ್ನು ಮುಖ್ಯಮಂತ್ರಿಗ ಬಿ.ಎಸ್.ಯಡಿಯೂರಪ್ಪನವರು ಉದ್ಘಾಟಿಸಿದರು. ಹಾಗೂ ದತ್ತು ಸ್ವೀಕಾರ ಪತ್ರಗಳನ್ನು ವಿತರಿಸಿ, ಶಿಕ್ಷಣ ಸುಧಾರಣಾ ಶಿಫಾರಸ್ಸುಗಳ ಪುಸ್ತಕವನ್ನು ಬಿಡುಗಡೆ ಮಾಡಿದರು.
ತಮ್ಮದೇ ಕ್ಷೇತ್ರದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ದತ್ತು ಸ್ವೀಕಾರ ಪತ್ರಗಳನ್ನು ವಿತರಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಎಸ್.ಸುರೇಶ್ ಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಉಪಸ್ಥಿತರಿದ್ದರು.
PublicNext
25/11/2020 07:50 am