ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಮೇರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಡಿಸೆಂಬರ್ 30ರವರೆಗೆ ಅಪ್ಲಿಕೇಶನ್ ಸಲ್ಲಿಸಬಹುದು.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಮೇರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್ ಶಿಪ್ ಪೋರ್ಟಲ್ ಅಧಿಕೃತ ವೆಬ್ ಸೈಟ್ https://scholarships.gov.in ಗೆ ಭೇಟಿ ನೀಡಬೇಕು.

ದಿನಾಂಕ 30-12-2020 ರೊಳಗಾಗಿ ಆನ್ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ, ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದ ಹಾರ್ಡ್ ಕಾಪಿಯನ್ನು ಸಂಬಂಧಿಸಿದ ತಾಲೂಕು ಮಾಹಿತಿ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು

- ಆಧಾರ್ ಕಾರ್ಡ್

- ವಿದ್ಯಾರ್ಹತೆ ದಾಖಲೆಗಳು

- ಪ್ರಸಕ್ತ ಸಾಲಿಗೆ ಪ್ರವೇಶ ಪಡೆದ (ಪ್ರಾಥಮಿಕ, ಪ್ರೌಢ ಶಿಕ್ಷಣ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ) ದಾಖಲೆಗಳು

- ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಪ್ರಮಾಣ ಪತ್ರ.

- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

- ಸಹಿ ಸ್ಕ್ಯಾನ್ ಕಾಪಿ

- ಭಾವಚಿತ್ರ ಸ್ಕ್ಯಾನ್ ಕಾಪಿ

Edited By : Nirmala Aralikatti
PublicNext

PublicNext

01/12/2020 07:32 pm

Cinque Terre

30.56 K

Cinque Terre

0