ಬೆಂಗಳೂರು: ಪ್ರತಿ ವರ್ಷ ಮಾರ್ಚ್, ಏಪ್ರಿಲ್‌ನಲ್ಲಿ ನಡೆಯುತ್ತಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು, ಶಿಕ್ಷಣ ತಜ್ಞರ ಸಲಹೆ ಅನುಸಾರ ಈ ಬಾರಿ 2 ತಿಂಗಳು ಮುಂದೂಡಿಕೆಯಾಗುವ ಸಾಧ್ಯತೆಯಿದೆ.
ಈ ವರ್ಷ ಕೋವಿಡ್ 19 ಹಿನ್ನೆಲೆಯಲ್ಲಿ ಶಾಲೆಗಳು ಇನ್ನೂ ಕೂಡ ಆರಂಭವಾಗಿಲ್ಲ. ಆನ್‌ಲೈನ್ ತರಗತಿಗಳು ತಡವಾಗಿ ಆರಂಭವಾಗಿದೆ. ಈ ಕಾರಣಕ್ಕೆ ಜೂನ್ – ಜುಲೈ ತಿಂಗಳಿಗೆ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಬಹುದು ಎಂದು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ.
ತಜ್ಞರು ಕೊಟ್ಟ ಈ ಸಲಹೆಯನ್ನು ಸರ್ಕಾರ ಒಪ್ಪುತ್ತಾ? ಎಂಬುದೇ ಸದ್ಯದ ಪ್ರಶ್ನೆಯಾಗಿದೆ. ಈಗಾಗಲೇ ಶಿಕ್ಷಣ ಸಚಿವರು ಶಾಲೆ ಯಾವಾಗ ಆರಂಭಿಸಬೇಕು ಎನ್ನುವುದರ ಬಗ್ಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
ಕೋವಿಡ್ ಎರಡನೇ ಅಲೆ ಜನವರಿಯಿಂದ ಆರಂಭವಾಗಬಹುದು ಎಂದು ತಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಎರಡನೇ ಅಲೆ ಆರಂಭವಾಗದೇ ಇದ್ದರೆ ಕರ್ನಾಟಕದಲ್ಲಿ ಜನವರಿ ವೇಳೆ ತರಗತಿಯನ್ನು ತೆರೆಯಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
PublicNext
03/12/2020 11:39 am