ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏಮ್ಸ್ ಪರೀಕ್ಷೆಯಲ್ಲಿ ವಿಜಯಪುರದ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ

ವಿಜಯಪುರ: ದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ವಿಜಯಪುರದ ದಿವ್ಯಾ ಅರವಿಂದ ಹಿರೊಳ್ಳಿ ಡಿಎಂ ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಏಮ್ಸ್ ನವೆಂಬರ್ 20ರಂದು ಪರೀಕ್ಷೆ ನಡೆಸಿದ್ದು ದಿವ್ಯಾ ಶೇ.67.08 ಅಂಕಗಳೊಂದಿಗೆ ಫಸ್ಟ್‌ ರ್ಯಾಂಕ್ ಪಡೆದಿದ್ದಾರೆ.

ದಿವ್ಯಾ ವಿಜಯಪುರದ ಸೆಷನ್ಸ್ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿರಿವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿದ್ದು, ಬಿಎಲ್‌ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ, ಪಾಂಡಿವೇರಿಯ ಜಿಪ್ ಮೇರ್ (JIPMER)ನಲ್ಲಿ ಫೆಲೋಷಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಫೆಲೋಷಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಂಗ ಮಾಡಿದ್ದಾರೆ.

Edited By : Vijay Kumar
PublicNext

PublicNext

07/12/2020 08:14 am

Cinque Terre

51.57 K

Cinque Terre

13