ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾಗಮ ಮರು ಆರಂಭ : ಸಚಿವ ಸುರೇಶ್ ಕುಮಾರ್

ಆಗಸ್ಟ್ 10 ರಂದು ಸ್ಥಗಿತಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಪರಿಸ್ಕೃತ ರೂಪದಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳು ಹೆಚ್ಚಾಗುತ್ತಿವೆ.

ಇವುಗಳನ್ನು ತಪ್ಪಿಸಲು ಸುರಕ್ಷಾ ಕ್ರಮಗಳೊಂದಿಗೆ ವಿದ್ಯಾಗಮ ಜಾರಿಗೊಳಸಾಗುತ್ತದೆ.

ಕೋವಿಡ್ ಮಾರ್ಗಸೂಚಿಯಂತೆ ವಿದ್ಯಾಗಮ ಕಾರ್ಯಕ್ರಮ ಪುನರಾರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮವು ನಡೆಯಲು ಅನುವು ಮಾಡಿ ಕೊಡಲಾಗಿದೆ.

ಪ್ರಸ್ತುತ ಇರುವ ಆನ್ ಲೈನ್ , ಚಂದನಾ ವಾಹಿನಿಯ ಪಾಠಗಳು ಎಂದಿನಂತೆ ಮುಂದುವರೆಯಲಿವೆ.

ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬಹುದಾಗಿದೆ.

ಪೋಷಕರ ಅನುಮತಿ ಪತ್ರ ಕಡ್ಡಾಯ ವಾಗಿದ್ದು, ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್-19ರ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ.

ಸ್ಯಾನಿಟೈಸರ್, ಸೋಪ್ ಇತರೆ ನೈರ್ಮಲೀಕರಣ ವ್ಯವಸ್ಥೆ ಮಾಡಿಕೊಳ್ಳುವುದು.

ವಿದ್ಯಾಗಮವು ಶಾಲೆಯ ಆರಂಭವಲ್ಲ. ಒಮ್ಮೆಗೆ ಅತಿ ಕಡಿಮೆ ಸಂಖ್ಯೆಯ ಮಕ್ಕಳ ತಂಡದೊಂದಿಗೆ ಶಾಲಾವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಅನುಕೂಲಕ್ಕೆ ತಕ್ಕಂತೆ ಪಾಠಗಳು ನಡೆಯುತ್ತವೆ.

ವಿದ್ಯಾಗಮ ತರಗತಿಗಳನ್ನು ಸರ್ಕಾರದ ಮಾರ್ಗದರ್ಶಿ ಸೂತ್ರದ ಪ್ರಕಾರ ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳು ವಿಶೇಷವಾಗಿ ಬಜೆಟ್ ಶಾಲೆಗಳು ತಮ್ಮ ಪರಿಸರದಲ್ಲಿ ಆರಂಭಿಸಿ ತಮ್ಮ ಶಾಲೆಯ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಬಹುದಾಗಿದೆ.

ಪರಿಷ್ಕರಿಸಿ ಪುನರಾರಂಭಿಸಲು ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದು, ಶೀಘ್ರವೇ ಪುನರಾರಂಭಿಸಲಾಗುವುದು.

ಒಟ್ಟಾರೆ ಪ್ರತಿಯೊಬ್ಬರೂ ನಮ್ಮ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳ ಕಲಿಕಾ ನಿರಂತರತೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

15/12/2020 06:58 pm

Cinque Terre

56.8 K

Cinque Terre

1

ಸಂಬಂಧಿತ ಸುದ್ದಿ