ದೆಹಲಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್ ಟಿಎ) 2021 ಜೆಇಇ ಮೇನ್ ಪರೀಕ್ಷೆಯನ್ನು ನಾಲ್ಕು ಬಾರಿ ನಡೆಸಲಿದೆ. ಮೊದಲ ಬಾರಿ ಪರೀಕ್ಷೆಯು ಫೆಬ್ರವರಿ ತಿಂಗಳಲ್ಲಿ ನಡೆಯಲಿದ್ದು, ಇಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ರವರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಿದ್ದಾರೆ.
ಜೆಇಇ ಮೇನ್ 2021 ಮೊದಲ ಆವೃತ್ತಿ ಪರೀಕ್ಷೆಯು ಫೆಬ್ರವರಿ 23 ರಿಂದ 26 ರವರೆಗೆ ನಡೆಯಲಿದೆ. ನಂತರ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಉಳಿದ 3 ಆವೃತ್ತಿ ಪರೀಕ್ಷೆಗಳು ನಡೆಯಲಿವೆ.
ಇದೇ ಮೊದಲ ಬಾರಿಗೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಪೋಖ್ರಿಯಾಲ್ ತಿಳಿಸಿದ್ದಾರೆ.
ಮುಂದಿನ ವರ್ಷ ಒಟ್ಟು ನಾಲ್ಕು ಬಾರಿ ಪರೀಕ್ಷೆ ನಡೆಸಲು ಕೇಂದ್ರ ನಿರ್ಧರಿಸಿದೆ.
ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಬಹುದು. ಪರೀಕ್ಷೆ ಮುಗಿದ ನಾಲ್ಕೈದು ದಿನಗಳಲ್ಲಿ ಫಲಿತಾಂಶ ಪ್ರಕಟಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ರಮೇಶ್ ಪೋಖ್ರಿಯಾಲ್ ನಿಶಾಂಕ್ ಘೋಷಿಸಿದ್ದಾರೆ.
ಹೊಸ ಶಿಕ್ಷಣ ನೀತಿಯಡಿ ಕನ್ನಡ, ತಮಿಳು, ತೆಲುಗು, ಉರ್ದು, ಮಲಯಾಳಿ ಸೇರಿದಂತೆ 13 ಭಾಷೆಯಲ್ಲಿ ಜೆಇಇ ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಹೇಳಿದ್ದಾರೆ.
PublicNext
16/12/2020 08:02 pm