ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ಮಧ್ಯೆ ರುಪ್ಸಾ ಸಂಘಟನೆಯು ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿಯಲು ಮುಂದಾಗಿದೆ.
ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನಾಳೆ(ಸೋಮವಾರ)ದಿಂದ ಹೋರಾಟ ಕೈಗೊಳ್ಳಲಾಗುವುದು. ಹೀಗಾಗಿ ನಾಳೆಯಿಂದ ಆನ್‌ಲೈನ್ ಹಾಗೂ ಆಫ್‌ಲೈನ್ ಕ್ಲಾಸ್‌ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ.
ಶಿಕ್ಷಣ ಸಚಿವರಿಗೆ ಸೋಮವಾರ ನಮ್ಮ ಬೇಡಿಕೆಗಳನ್ನು ಮತ್ತೆ ತಿಳಿಸುತ್ತೇವೆ. ಇದಾದ ನಂತರ ಎಲ್ಲ ಶೈಕ್ಷಣಿಕ ಚಟುವಟಿಕೆ ನಿಲ್ಲಿಸುತ್ತೇವೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ.
PublicNext
20/12/2020 03:53 pm