ಬೆಂಗಳೂರು: ವಿದ್ಯಾರ್ಥಿಗಳಿಲ್ಲದೇ ಕಟ್ಟುನಿಟ್ಟಾಗಿ ಕೊರೊನಾ ಮಾರ್ಗಸೂಚಿ ಪಾಲಿಸುವ ಮೂಲಕ ಶಿಕ್ಷಕರು ಶಾಲೆಗಳಲ್ಲಿ ಸ್ವಾತಂತ್ರೋತ್ಸವ ಆಚರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿದೆ.
ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವೀಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ. ಮತ್ತೊಂದೆಡೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಇತರ ನಾಗರಿಕರೊಂದಿಗೆ ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ.
PublicNext
14/08/2021 11:25 am