ಬೆಂಗಳೂರು : ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
ಶಾಲಾ ಕಾಲೇಜು ಮರು ಪ್ರಾರಂಭ ಮಾಡುವ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.
ಇದರ ಜೊತೆಗೆ ಶಿಕ್ಷಕ ಸಂಘಟನೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ.
PublicNext
29/09/2020 11:05 am