ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಿಎಂ ಸಭೆ : ಶಾಲಾ-ಕಾಲೇಜು ಆರಂಭ ಭವಿಷ್ಯ ನಿರ್ಧಾರ

ಬೆಂಗಳೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಅಡೆತಡೆಗಳು ಉಂಟಾಗಿವೆ. ಆನ್ ಲೈನ್ ಕ್ಲಾಸ್, ವಿದ್ಯಾಗಮ,ಬಿಸಿಯೂಟ ಬಂದ್ ಹೀಗೆ ಸಾಕಷ್ಟು ಅಲ್ಲೊಲ್ಲ ಕಲ್ಲೊಲಗಳು ಸೃಷ್ಠಿಯಾಗಿವೆ.

ಸದ್ಯದ ಪರಿಸ್ಥಿತಿಯಲ್ಲಿ ಶಾಲಾ ಆರಂಭಿಸಬೇಕಾ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿರುವ ಕಾರಣ, ಇಂದು ಶನಿವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರ ಮಹತ್ವದ ಸಭೆ ನಡೆಯಲಿದೆ.

ಈಗಾಗಲೇ ತಾಂತ್ರಿಕ ಶಿಕ್ಷಣ ಸಮಿತಿ ಹಾಗೂ ಆರೋಗ್ಯ ಇಲಾಖೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ತನ್ನ ವರದಿ ಯನ್ನು ಸರ್ಕಾರಕ್ಕೆ ಸಲ್ಲಿಸಿವೆ.

ಎರಡು ಸಮಿತಿಗಳು ಶಾಲಾ-ಕಾಲೇಜು ಜನವರಿಯಿಂದ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪುನರಾರಂಭಿಸಲು ಅನುಮತಿಸಿವೆ.

ಈ ಹಿನ್ನಲೆಯಲ್ಲಿ ಮಧ್ಯಾಹ್ನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿವಿಧ ಹಂತದ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದೆ.

Edited By : Nirmala Aralikatti
PublicNext

PublicNext

19/12/2020 11:44 am

Cinque Terre

95.69 K

Cinque Terre

8

ಸಂಬಂಧಿತ ಸುದ್ದಿ