ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಜನವರಿ 1ರಿಂದ ಶಾಲೆಗಳು ಪುನರಾರಂಭ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ ಮಾರ್ಚ್ ತಿಂಗಳಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳ ಆರಂಭಕ್ಕೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಇಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜನವರಿ 1ರಿಂದ ಶಾಲೆ ಆರಂಭಕ್ಕೆ ಒಪ್ಪಿಗೆ ದೊರೆತಿದೆ.

ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿ, ತಜ್ಞರು ಕೊಟ್ಟ ಸಲಹೆ ಮೇರೆಗೆ 6ರಿಂದ ಪಿಯುಸಿ ತರಗತಿಯವರೆಗೆ ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ.

ಮೊದಲ ಹಂತವಾಗಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ.

ನಂತರ 9 ಮತ್ತೆ ಪ್ರಥಮ ಪಿಯುಸಿ ತರಗತಿಗಳು ಆರಂಭವಾಗಲಿವೆ.

ಜನವರಿ ಜನವರಿ 1ರಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭ.

ಈ ಬಗ್ಗೆ ಸಭೆಯ ನಂತರ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಜನವರಿ 1ರಿಂದ 8 ಮತ್ತು 9ನೇ ತರಗತಿ ವಿದ್ಯಾಗಮ ಆರಂಭವಾಗಲಿದೆ.

ಜನವರಿ 6 ರಿಂದ 9ನೇ ತರಗತಿ ವಿದ್ಯಾಗಮ ಆರಂಭವಾಗಲಿದೆ. ಈ ಬಾರಿ ಶಾಲೆ ಆವರಣ ಒಳಗೆ ವಾರಕ್ಕೆ ಮೂರು ದಿನ ಮಾತ್ರ ವಿದ್ಯಾಗಮ ಇರಲಿದೆ.

ಶಾಲೆಗೆ ಬರೋ ಮಕ್ಕಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

19/12/2020 02:19 pm

Cinque Terre

69.45 K

Cinque Terre

9

ಸಂಬಂಧಿತ ಸುದ್ದಿ