ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಡಿಜಿಟಲ್ ಕಲಿಕೆಯನ್ನು ವ್ಯಾಪಕವಾಗಿ ಉತ್ತೇಜಿಸುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿದೆ.
ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ʼಉನ್ನತ ಶಿಕ್ಷಣದಲ್ಲಿ ಜಾಗತಿಕ ಮಟ್ಟದ ಸಿದ್ಧತೆʼ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಮಾಹಿತಿ ನೀಡಿದರು.
ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರಕಾರಿ ಎಂಜನಿಯರಿಂಗ್ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್ ಗಳನ್ನು ನೀಡಲಾಗುತ್ತಿದೆ ಎಂದರು.
ಟ್ಯಾಬ್ಲೆಟ್ಗಳ ಖರೀದಿಗೆ ಒಟ್ಟು 155.4ಕೋಟಿ ರೂ.ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್ ಅನ್ನು 10,000 ರೂ.ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ.
ಒಂದು ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಗಳು ಪೂರಕವಾಗದಿದ್ದರೆ ಅಡ್ವಾನ್ಸ್ಡ್ ವರ್ಷನ್ ಲ್ಯಾಪ್ ಟಾಪ್ ಖರೀದಿಗೆ ಕಾಲೇಜುಗಳ ಮೂಲಕವೇ ಶಿಕ್ಷಣ ಸಾಲಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.
PublicNext
25/12/2020 09:47 pm