ದೆಹಲಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ 218 ಭಾರತೀಯರನ್ನು ಹೊತ್ತ 9ನೇ ವಿಶೇಷ ವಿಮಾನವು ಮಂಗಳವಾರ ʻಆಪರೇಷನ್ ಗಂಗಾʼ ಅಡಿಯಲ್ಲಿ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ದೆಹಲಿ ತಲುಪಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ಹಾಗೂ ಅವರೊಂದಿಗೆ ಕೆಲ ಹೊತ್ತು ಸಮಾಲೋಚನೆ ನಡೆಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಿನಿ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ʻಆಪರೇಷನ್ ಗಂಗಾʼ ಅಡಿಯಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಸಂತೋಷದಿಂದಿದ್ದಾರೆ ಮತ್ತು ಭಾರತ ಸರ್ಕಾರದ ಪ್ರಯತ್ನಗಳು ಅದ್ಭುತವಾಗಿದೆ ಎಂದರು.
ಉಕ್ರೇನ್‌ನಲ್ಲಿರುವ ತಮ್ಮ ಸ್ನೇಹಿತರಿಗೆ ತಾಳ್ಮೆಯಿಂದಿರುವಂತೆ ಹೇಳಲು ನಾನು ಈ ವಿದ್ಯಾರ್ಥಿಗಳಿಗೆ ಮನವಿ ಮಾಡುತ್ತೇನೆ. ಅವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು. ವಿಮಾನಗಳು ನಿರಂತರವಾಗಿ ಕೆಲಸ ಮಾಡುತ್ತಿವೆ. ಪರಿಣಾಮಕಾರಿ ಸಮನ್ವಯಕ್ಕಾಗಿ ನಾಲ್ವರು ಮಂತ್ರಿಗಳನ್ನು ಸಹ ಆ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
PublicNext
02/03/2022 09:07 am