ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ (ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ನಾಳೆ ಮತ್ತು ನಾಡಿದ್ದು ( ಮೇ 21& 22) ಸ್ಪರ್ಧಾತ್ಮಕ ಪರೀಕ್ಷೆ ಜರುಗಲಿದೆ.
ಈ ಬಾರಿ ಬಾರಿ ಇಂಜಿನಿಯರ್ ಶಿಕ್ಷಣ ಪಡೆದಿರುವವರಿಗೂ ಶಿಕ್ಷಕರಾಗುವ ಅವಕಾಶ ಕಲ್ಪಿಸಿದೆ. 45 ವರ್ಷಗಳ ವರೆಗಿನ ವಯೋಮಿತಿ ನೀಡಲಾಗಿದೆ. ಪದವಿಯಲ್ಲಿ ಶೇ.50ರಷ್ಟು ಅಂಕ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿದವರನ್ನು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಪದವಿ ಮತ್ತು ಬಿ.ಇಡಿ.ಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ರಾಜ್ಯದ 435 ಪರೀಕ್ಷಾ ಕೇಂದ್ರ ಗಳಲ್ಲಿ ಸಿಇಟಿ ನಡೆಯಲಿದೆ.
1,00683 ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಲ್ಲಿದ್ದಾರೆ.ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ವಸ್ತು ಒಯ್ಯುವಂತಿಲ್ಲ. ಮೊಬೈಲ್, ವಾಚ್, ಎಲೆಕ್ಟ್ರಾನಿಕ್ ಡಿವೈಸ್ಗೆ ಅವಕಾಶ ಇರಲ್ಲ. ಪ್ರಶ್ನೆಪತ್ರಿಕೆ ಗೌಪ್ಯತೆ, ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ.
ಪ್ರತಿ ಕೇಂದ್ರದಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶವಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಕ್ಯಾಮರಾ ಅಳವಡಿಸಿಕೊಳ್ಳಲಾಗಿದೆ.
PublicNext
21/05/2022 11:02 am