ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಆದಿಚುಂಚನಗಿರಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇಂದು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

ಆದಿಚುಂಚನಗಿರಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸ್, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನಾಗಮಂಗಲದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಹಾಗೂ ಹೃದಯ ವಿಜ್ಞಾನ ವಿಭಾಗದ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಡಾ ಕೆ.ಸುಧಾಕರ್, ಕೆ.ಗೋಪಾಲಯ್ಯ, ನಾರಾಯನಗೌಡ, ಶಾಸಕ ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Edited By :
PublicNext

PublicNext

16/05/2022 05:41 pm

Cinque Terre

52.48 K

Cinque Terre

0