ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡಲ್ಲಿ ತಹಶೀಲ್ದಾರ್ ಜೊತೆ ವಿದ್ಯಾರ್ಥಿನಿಯರ ವಾಗ್ವಾದ: ಹೊರಗೆ ಹೋಗಿ ಎನ್ನಲು ಅಧಿಕಾರ ಇಲ್ಲ

ಚಿಕ್ಕಮಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕಾಫಿ ನಾಡು ಚಿಕ್ಕಮಗಳೂರಿನಲ್ಲೂ ಕಾಲಿಟ್ಟಿದೆ. ಇಂದು ಕಾಲೇಜಿಗೆ ಬಂದ ಹಿಜಾಬ್‌ಧಾರಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿ‍ದೆ‌. ಈ ಹಿನ್ನೆಲೆ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

ಸ್ಥಳಕ್ಕೆ ಬಂದ ಚಿಕ್ಕಮಗಳೂರು ತಹಶೀಲ್ದಾರ್ ಕಾಂತರಾಜ್ ಅವರು ವಿದ್ಯಾರ್ಥಿನಿಯರ ಮನವೊಲಿಕೆಗೆ ಯತ್ನಿಸಿದ್ದಾರೆ. 'ಸರ್ ನೀವು ಹಿಂದೂ ವಿದ್ಯಾರ್ಥಿಗಳಿಗೆ ಒಂದು ನ್ಯಾಯ, ನಮಗೊಂದು ನ್ಯಾಯ ಅಂತ ಮಾಡಬೇಡಿ. ಕೋರ್ಟ್ ಅಂತಿಮ ಆದೇಶ ಬರುವವರೆಗೂ ನಾವು ಹಿಜಾಬ್ ಧರಿಸುತ್ತೇವೆ ಎಂದು ತಹಶೀಲ್ದಾರ್ ಜೊತೆ ವಾಗ್ವಾದ ನಡೆಸಿದ್ದಾರೆ.

Edited By : Manjunath H D
PublicNext

PublicNext

16/02/2022 03:57 pm

Cinque Terre

56.74 K

Cinque Terre

3

ಸಂಬಂಧಿತ ಸುದ್ದಿ