ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಾಲಾ-ಕಾಲೇಜುಗಳನ್ನ ಜನವರಿ 1ರಿಂದ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಬೆನ್ನಲ್ಲೇ ಮಹತ್ವದ ಆದೇಶವನ್ನು ಹೊರಡಿಸಿದೆ.
ಹೌದು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈವರೆಗೆ ಶಾಲೆಗಳು ಪ್ರಾರಂಭವಾಗಿಲ್ಲ. ಹೀಗಾಗಿ ಆನ್ಲೈನ್ ಮೂಲಕವೇ ಶಿಕ್ಷಣ ನೀಡಲಾಗುತ್ತಿದೆ. ಇದನ್ನು ಅರಿತ ಶಿಕ್ಷಣ ಇಲಾಖೆ ಪ್ರತಿ ವಿಷಯಗಳಲ್ಲೂ ಕೆಲ ಪಠ್ಯ ಕಡಿತಗೊಳಿಸಿದೆ.
ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯ ಕಡಿತಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸಿಲೆಬಸ್ ಕಡಿತ ಮಾಡಿರುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಸೆ. 1ರಿಂದ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗೆ ಇಳಿಕೆ ಮಾಡಲಾಗಿದೆ.
PublicNext
28/12/2020 06:38 pm