ಬೆಂಗಳೂರು: ಕೊರೊನಾ ಸಂಕಷ್ಟದ ನಂತರ ಶಾಲೆಗಳು ಮರುಪ್ರಾರಂಭವಾಗುತ್ತಿವೆ ಈ ಸಂದರ್ಭದಲ್ಲಿ ಸಂಸದ ಪ್ರಲ್ಹಾದ ಜೋಶಿ ಸರ್ಕಾರಿ ಶಾಲೆಗಳಿಗೆ 2000 ಡೆಸ್ಕ್ ನೀಡಿರುವುದು ನಿಜಕ್ಕೂ ಮಾದರಿಯ ಕಾರ್ಯ ಎಂದು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಹೇಳಿದ್ದಾರೆ.
‘ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಾವು ಪ್ರತಿನಿಧಿಸುವ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿನ ಸರ್ಕಾರಿ ಶಾಲೆಗಳಿಗೆ 2000 ಡೆಸ್ಕ್ ಗಳನ್ನು ವಿತರಿಸಿದ್ದಾರೆ. ಎಲ್ಲ ಸಂಸದರು ಈ ಮಾದರಿಯನ್ನು ಅನುಸರಿಸಬೇಕು’ ಎಂದು ದೊರೆಸ್ವಾಮಿ ಹೇಳಿದ್ದಾರೆ.
‘ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಗತ್ಯವಿರುವ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಕೆಲಸ ನಡೆಯುತ್ತಿದೆ. ಹಲವು ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತಿದ್ದಾರೆ. ಜೋಶಿಯವರ ಈ ನಡೆಯಿಂದ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ.
ಮುಂದೆ, ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.
PublicNext
26/01/2021 11:16 am