ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಲ್ಪಟ್ಟ ಎಫ್ ಡಿಎ ಪರೀಕ್ಷೆಗೆ ಕರ್ನಾಟಕ ಲೋಕ ಸೇವಾ ಆಯೋಗ ಮರು ದಿನಾಂಕ ನಿಗದಿಪಡಿಸಿದೆ. ಫೆಬ್ರವರಿ 28ರಂದು ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಪರೀಕ್ಷೆ ನಡೆಯಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಎಫ್ ಡಿಎ ಪರೀಕ್ಷೆಯ ಹಿಂದಿನ ದಿನ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಜನವರಿ 24ರಂದು ನಡೆಬೇಕಿದ್ದ ಪರೀಕ್ಷೆಯನ್ನ ರದ್ದು ಮಾಡಲಾಗಿತ್ತು. ಇನ್ನು ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಆರು ಜನ ಆರೋಪಿಗಳನ್ನ ಸಿಸಿಬಿ ವಶಕ್ಕೆ ಪಡೆದಿದೆ.
ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಪರೀಕ್ಷೆಯ ಮರು ದಿನಾಂಕ ಪ್ರಕಟವಾಗಿದೆ.
PublicNext
02/02/2021 04:29 pm