2021ರ ಸಿಬಿಎಸ್ಸಿ 10 ಮತ್ತು 12ನೇ ತರಗತಿಗಳ ಪರೀಕ್ಷೆ ವೇಳಾಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಂಗಳವಾರ(ಫೆ.2)ದಂದು ಪ್ರಕಟಿಸಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್ ಕಾರಣ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಸಚಿವಾಲಯ ಮುಂದೂಡಿತ್ತು. ಸಾಮಾನ್ಯವಾಗಿ ಪ್ರತಿವರ್ಷ ಸಿಬಿಎಸ್ಇ ಪ್ರಾಕ್ಟಿಕಲ್ ಪರೀಕ್ಷೆಗಳು ಜನವರಿಯಲ್ಲಿ ನಡೆದರೆ, ಥಿಯರಿ ಪರೀಕ್ಷೆಗಳು ಫೆಬ್ರವರಿಯಲ್ಲಿ ಆರಂಭವಾಗಿ ಮಾರ್ಚ್ನಲ್ಲಿ ಮುಗಿಯುತ್ತಿದ್ದವು.
ಸಿಬಿಎಸ್ ಇ 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳು ಆಫ್ ಲೈನ್ ನಲ್ಲಿ ನಡೆಯಲಿವೆ. ಅಂದರೆ ವಿದ್ಯಾರ್ಥಿಗಳು ಖುದ್ದು ಹಾಜರಾಗಿ ಪರೀಕ್ಷೆ ಬರೆಯಬೇಕಿದೆ. ಸಿಬಿಎಸ್ ಇ 10 ಮತ್ತು 12ನೇ ತರಗತಿಗಳ ಪರೀಕ್ಷೆ ಮೇ 4 ರಿಂದ ಜೂನ್ 10ರವರೆಗೆ ನಡೆಯಲಿದ್ದು, ಸುಮಾರು 30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಲು ಲಭ್ಯವಾಗುವ ಸಾಧ್ಯತೆಯಿದೆ. ಇನ್ನು ಡೇಟ್ ಶೀಟ್ ಡೌನ್ ಲೋಡ್ ಮಾಡಲು ಸಿಬಿಎಸ್ ಇ ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ಲಾಗಿನ್ ಆದ ಬಳಿಕ classes 10, 12 datesheets ಕ್ಲಿಕ್ ಮಾಡಿ ಡೇಟ್ ಶೀಟ್ ಡೌನ್ ಲೋಡ್ ಮಾಡಿಕೊಳ್ಳಬಹುದು.
PublicNext
02/02/2021 06:10 pm