ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

SSLC ಫಲಿತಾಂಶ ಆ. 7ಕ್ಕೆ ಪ್ರಕಟ- ರಿಸಲ್ಟ್​ ನೋಡಲು ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್​​ಎಸ್​ಎಲ್​ಸಿ ಫಲಿತಾಂಶವನ್ನು ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ನಿನ್ನೆಯೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ ನೋಡಲು ಹೀಗೆ ಮಾಡಿ:

1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ

2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ

3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ

4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ

5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ

Edited By : Vijay Kumar
PublicNext

PublicNext

06/08/2021 03:55 pm

Cinque Terre

54.46 K

Cinque Terre

0

ಸಂಬಂಧಿತ ಸುದ್ದಿ