ಬೆಂಗಳೂರು: ಸೆಪ್ಟಂಬರ್‌ನಿಂದ 1ರಿಂದ 8ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆಗಸ್ಟ್ 23 ರಿಂದ ರಾಜ್ಯದಲ್ಲಿ 9ರಿಂದ 12 ನೇ ತರಗತಿಗಳು ಆರಂಭವಾಗಲಿದೆ. ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶುಕ್ರವಾರ ವಿಸ್ತೃತ ಎಸ್‌ಒಪಿ (ಪ್ರಮಾಣಿತ ಕಾರ್ಯಚರಣೆ ವಿಧಾನ) ಬಿಡುಗಡೆ ಮಾಡಲಾಗುವುದು. ಇದರ ಪ್ರತಿಕ್ರಿಯೆಯನ್ನು ಆಧರಿಸಿ ಪ್ರಾಥಮಿಕ ಶಾಲಾ ತರಗತಿಗಳನ್ನು ಆರಂಭಿಸಲಾಗುವುದು. ಈ ಹಿನ್ನೆಲೆಯಲ್ಲಿ ಆಗಸ್ಟ್ 30ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
PublicNext
12/08/2021 05:27 pm