ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ಮುಂದೆ ಬಾಲಕಿಯರಿಗೂ ಸೈನಿಕ ಶಾಲೆಗಳಲ್ಲಿ ಪ್ರವೇಶ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಇನ್ಮುಂದೆ ಬಾಲಕಿಯರಿಗೂ ಸೈನಿಕ ಶಾಲೆಗಳಲ್ಲಿ ಪ್ರವೇಶ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಸ್ತುತ 33 ಸೈನಿಕ ಶಾಲೆಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಮಿಜೊರಾಮ್‌ನಲ್ಲಿ ಎರಡೂವರೆ ವರ್ಷಗಳ ಹಿಂದೆ ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರವೇಶ ನೀಡುವ ಪ್ರಥಮ ಪ್ರಯೋಗವನ್ನು ನಡೆಸಲಾಗಿತ್ತು ಎಂಬುದನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, ಈಗ ಭಾರತ ಸರ್ಕಾರ ಎಲ್ಲಾ ಸೈನಿಕ ಶಾಲೆಗಳಲ್ಲಿಯೂ ಬಾಲಕಿ/ಯುವತಿಯರಿಗೆ ಪ್ರವೇಶ ಲಭ್ಯವಿರಲಿದೆ ಎಂದು ಹೇಳಿದ್ದಾರೆ.

ಸೈನಿಕ ಶಾಲೆಗಳ ಸೊಸೈಟಿ ಸೈನಿಕ ಶಾಲೆಗಳನ್ನು ನಡೆಸುತ್ತಿದ್ದು ಆಡಳಿತಾತ್ಮಕ ನಿಯಂತ್ರಣ ರಕ್ಷಣಾ ಸಚಿವಾಲಯದ್ದಾಗಿದೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರ್ಪಡೆಯಾಗುವುದಕ್ಕೆ ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗಿದೆ.

Edited By : Vijay Kumar
PublicNext

PublicNext

15/08/2021 10:11 am

Cinque Terre

25.82 K

Cinque Terre

1

ಸಂಬಂಧಿತ ಸುದ್ದಿ