ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳು ಇಲ್ಲಿದೆ ನೋಡಿ

ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು 530 ಪರೀಕ್ಷಾ ಕೇಂದ್ರಗಳಲ್ಲಿ ನಾಳೆಯಿಂದ ಆಗಸ್ಟ್ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಈ ಮೂಲಕ ಎಲ್ಲಾ ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದ್ದು, ರಾಜ್ಯದ 6 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಆಗಸ್ಟ್​ 28ರಂದು ಜೀವಶಾಸ್ತ್ರ ಮತ್ತು ಗಣಿತ. ಆಗಸ್ಟ್​ 29ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ, ಆಗಸ್ಟ್​ 30ರಂದು ಹೊರನಾಡು ಮತ್ತು ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಿಗದಿ ಮಾಡಲಾಗಿದೆ. ಈ ಪರೀಕ್ಷೆಗೆ 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡಯಲಿದೆ. 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದು, ಉಳಿದ 444 ಕೇಂದ್ರಗಳು ಇನ್ನುಳಿದ ಜಿಲ್ಲೆಗಳಲ್ಲಿವೆ.

ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು:

* ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು

* ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ಬರೆಯಬೇಕು

* ಅಭ್ಯರ್ಥಿಗಳು ಸಿಇಟಿ ಸಂಖ್ಯೆಯನ್ನು, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ತುಂಬಬೇಕು

* ಓಎಂಆರ್ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆಯಲ್ಲಿರುವ ಕ್ರಮ ಸಂಖ್ಯೆ ಒಂದೇ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು

* ಉತ್ತರಗಳನ್ನು OMR ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕು

* Blue/ Black ಬಾಲ್ ಪಾಯಿಂಟ್ ಪೆನ್ನನ್ನು ತೆಗೆದುಕೊಂಡು ಹೋಗಬೇಕು

* ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ

* ಪರೀಕ್ಷೆಯ ಮೊದಲನೇ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು

* ಮಾಹಿತಿಗಾಗಿ ಕೆಇಎ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದು

* ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಮಾನ್ಯತೆ ಇರುವ ಕಾಲೇಜಿನ ಗುರುತಿನ ಚೀಟಿ

* 2ನೇ ಪಿಯುಸಿ ಪ್ರವೇಶ ಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಬೇಕು

* ಪರೀಕ್ಷಾ ಕೊಠಡಿಯೊಳಗೆ ವಾಚ್, ಮೊಬೈಲ್, ಕೈಗಡಿಯಾರ, ಟ್ಯಾಬ್ಲೆಟ್ ಕೊಂಡೊಯ್ಯುವಂತಿಲ್ಲ

* ಅಭ್ಯರ್ಥಿಗಳು ಓ.ಎಂ.ಆರ್. ಉತ್ತರ ಹಾಳೆಯಲ್ಲಿ ಎಡಗೈ ಹೆಬ್ಬೆರಳ ಗುರುತನ್ನು ಹಾಕುವಂತಿಲ್ಲ.

Edited By : Vijay Kumar
PublicNext

PublicNext

27/08/2021 01:58 pm

Cinque Terre

52.58 K

Cinque Terre

0