ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಮಕ್ಕಳಿಗೆ ಸಿಹಿಸುದ್ದಿ : ವಿದ್ಯಾರ್ಥಿ ವೇತನ ಜಾರಿಗೆ ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ಸಿಹಿಸುದ್ದಿ ನೀಡಿದೆ. ಹೌದು ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತ ಆದೇಶ ಹೊರಿಡಿಸಿದ್ದಾರೆ.

ಪಿಯುಸಿ, ಐಟಿಐ ಅಥವಾ ತತ್ಸಮಾನ ತರಗತಿಗಳಲ್ಲಿ ಓದುತ್ತಿರುವ ಬಾಲಕರಿಗೆ 2,500 ಮತ್ತು ಬಾಲಕಿಯರಿಗೆ ತಲಾ 3,000 ರು. ಶಿಷ್ಯವೇತನ ದೊರಕಲಿದೆ. ಪದವಿ, ಎಂಬಿಬಿಎಸ್, ಎಂಜಿನಿಯರಿಂಗ್ ಪದವಿ ಹಾಗೂ ಪದವಿಗೆ ಸಮನಾದ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ತಲಾ 5,000 ಮತ್ತು ವಿದ್ಯಾರ್ಥಿನಿಯರಿಗೆ ತಲಾ 5,500 ರು. ಶಿಷ್ಯವೇತನ ಪ್ರಕಟಿಸಲಾಗಿದೆ.

ಕಾನೂನು ಪದವಿ, ಅರೆ ವೈದ್ಯಕೀಯ, ಬಿ. ಫಾರ್ಮಾ, ನರ್ಸಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ 7,500 ಮತ್ತು ವಿದ್ಯಾರ್ಥಿನಿಯರಿಗೆ 8,000 ಶಿಷ್ಯವೇತನ ನೀಡಲಾಗುತ್ತದೆ. ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ 10,000, ವಿದ್ಯಾರ್ಥಿನಿಯರಿಗೆ 11,000 ಶಿಷ್ಯವೇತನ ಘೋಷಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರು ಸಾಗುವಳಿ ಮಾಡುತ್ತಿರುವ ಕೃಷಿ ಜಮೀನು ಹೊಂದಿರಬೇಕು.

ಪೋಷಕರು ಇಲ್ಲವಾದಲ್ಲಿ, ವಿದ್ಯಾರ್ಥಿಗಳ ಹೆಸರಿನಲ್ಲಿ ಕೃಷಿ ಜಮೀನು ಇರಬೇಕು. ಈ ಯೋಜನೆಯಡಿ ಒಬ್ಬ ವಿದ್ಯಾರ್ಥಿ ಒಮ್ಮೆ ಮಾತ್ರ ಶಿಷ್ಯವೇತನ ಪಡೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಅನುದಾನದಲ್ಲಿ ನೀಡುವ ಇತರೆ ಸಾಮಾನ್ಯ ಶಿಷ್ಯವೇತನಗಳನ್ನು ಯೋಜನೆಯ ಫಲಾನುಭವಿಗಳು ಆ ಅವಧಿಯಲ್ಲಿ ಪಡೆಯುವಂತಿಲ್ಲ.

ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಷ್ಟರ್, ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರುತ್ತದೆ. ಕೋರ್ಸ್ ನ ಸೆಮಿಸ್ಟರ್ ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ, ಪುನಹ ಆ ಸೆಮಿಸ್ಟರ್, ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೇ, ( ಪುನಹ ಪರೀಕ್ಷೆ ತೆಗೆದುಕೊಂಡರೇ ) ವಿದ್ಯಾರ್ಥಿಗಳು ಶಿಕ್ಷವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.

Edited By : Nirmala Aralikatti
PublicNext

PublicNext

03/09/2021 02:46 pm

Cinque Terre

39.21 K

Cinque Terre

6

ಸಂಬಂಧಿತ ಸುದ್ದಿ