ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿ ಆಗಸ್ಟ್ 28, 29 ಹಾಗೂ 30ರಂದು ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (K-CET 2021) ಫಲಿತಾಂಶ ಪ್ರಕಟಗೊಂಡಿದೆ.
ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬಳಿಕ ಕೆ-ಸಿಇಟಿ ಫಲಿತಾಂಶವನ್ನು ಪ್ರಕಟಿಸಿದರು.
ಫಲಿತಾಂಶ ವೀಕ್ಷಿಸುವುದು ಹೇಗೆ?:
* ಕೆಇಎ ಅಧಿಕೃತ ವೆಬ್ ಸೈಟ್ kea.kar.nic.in ಅಥವಾ cetonline.karnataka.gov.in ಭೇಟಿ ನೀಡಿ.
* ಮುಖಪುಟದಲ್ಲಿ ಕೆಸಿಇಟಿ 2021 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಅಪ್ಲಿಕೇಶನ್ ಸಂಖ್ಯೆ ಮತ್ತು ಪಾಸ್ ವರ್ಡ್ ಬಳಸಿ ಲಾಗ್-ಇನ್ ಮಾಡಿ
* ಹೀಗೆ ಲಾಗಿನ್ ಆದ ನಂತರ ನಿಮ್ಮ ಫಲಿತಾಂಶವನ್ನು ಪ್ರದರ್ಶಿಸಲಾಗುತ್ತದೆ. ಆ ಬಳಿಕ ನಿಮ್ಮ ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಿ.
PublicNext
20/09/2021 04:38 pm