ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಪ್ಲೊಮಾ ಪದವಿಯು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನ: ಇದು ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿ.ಯು.ಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ನಡವಳಿ ಹೊರಡಿಸಿದ್ದು, ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೇ ಎಂಬ ವಿಷಯವನ್ನು ನಿರ್ಧರಿಸುವ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಆದೇಶಿಸಲಾಯಿತು.

ಸಮಿತಿಯು ವಿಸ್ತಾರವಾಗಿ ಚರ್ಚಿ, ಸಾಧಕ-ಬಾಧಕಗಳನ್ನು ಪರಿಗಣಿಸಿ, ಅಭಿಪ್ರಾಯದೊಂದಿಗೆ ದಿನಾಂಕ 31-03-2021ರಂದು ಸರ್ಕಾರಕ್ಕೆ ಸಭಾ ನಡವಳಿಯೊಂದಿಗೆ ವರದಿಯನ್ನು ಸಲ್ಲಿಸಲಾಗಿದೆ. ಈ ವರದಿಯನ್ನು ಆಧರಿಸಿ, ಈ ಕೆಳಕಂಡ ತೀರ್ಮಾನ ಕೈಗೊಳ್ಳಲಾಗಿದೆ.

Edited By : Nagaraj Tulugeri
PublicNext

PublicNext

01/10/2021 12:39 pm

Cinque Terre

28.99 K

Cinque Terre

1

ಸಂಬಂಧಿತ ಸುದ್ದಿ