ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ದೇಶಾದ್ಯಂತ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಫಲಿತಾಂಶ ಪ್ರಕಟವಾಗಿದೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET-UG) 2021ರ ಫಲಿತಾಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ರಾತ್ರಿ 8-9 ಗಂಟೆ ಸುಮಾರಿಗೆ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಅಂಕಪಟ್ಟಿಗಳ ಜೊತೆಗೆ ಅಂತಿಮ ಕೀ ಉತ್ತರಗಳ ಪಟ್ಟಿಯನ್ನೂ ಬಿಡುಗಡೆ ಮಾಡಲಾಗುತ್ತದೆ. ಫಲಿತಾಂಶವು neet.nta.nic.in ನಲ್ಲಿ ಲಭ್ಯವಿರುತ್ತದೆ.
ಕಳೆದ ಸೆಪ್ಟೆಂಬರ್ 12ರಂದು ಪರೀಕ್ಷೆಯನ್ನು ನಡೆಸಲಾಗಿದ್ದು, 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು. ಅಭ್ಯರ್ಥಿಯು ಗಳಿಸಿದ ಕಟ್-ಆಫ್ ಮತ್ತು ಅಂಕಗಳ ಆಧಾರದ ಮೇಲೆ NTA ಅಖಿಲ ಭಾರತ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುತ್ತದೆ.
PublicNext
02/11/2021 07:27 am