ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣ ಮಾಡೋ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಈ ಸಿಹಿ ಸುದ್ದಿಕೊಟ್ಟಿದ್ದಾರೆ.
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಒಕ್ಕೂಟದವರು ಶೇಕಡ 30 ರಷ್ಟು ಶುಲ್ಕ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ. ಆದರೆ, ಈಗೀನ ಸ್ಥಿತಿಯಲ್ಲಿ ಇದು ಸಾಧ್ಯವೇ ಇಲ್ಲ. ಶುಲ್ಕ ಹೆಚ್ಚಳ ಮಾಡೋದರಿಂದ ಪೋಷಕರಿಗೆ ಹೊರೆಯಾಗುತ್ತದೆ. ಹಾಗಾಗಿಯೇ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕವನ್ನ ಹೆಚ್ಚಿಸಲು ನಾವು ಒಪ್ಪೋದಿಲ್ಲ ಅಂತಲೇ ಹೇಳಿದ್ದಾರೆ ಸುಧಾಕರ್.
PublicNext
09/11/2021 08:52 pm