ಬೆಂಗಳೂರು: ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಶಾಕ್ ಕೊಟ್ಟಿದೆ.
ಹೌದು. ಇದುವರೆಗೂ ಶಿಕ್ಷಕರ ಬಡ್ತಿಯನ್ನು ಸೇವಾ ಅನುಭವದ ಆಧಾರದ ಮೇಲೆ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಶಿಕ್ಷಕರ ಬಡ್ತಿಗೆ ಆದೇಶಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸಿ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 6ರಿಂದ 8ನೇ ತರಗತಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದೆ.
ಅಂದಹಾಗೇ ಪದವಿಯನ್ನು ಪೂರೈಸಿದಂತ 75 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರು ಬಡ್ತಿಯ ನಿರೀಕ್ಷೆಯಲ್ಲಿದ್ದಾರೆ. ಈ ಶಿಕ್ಷಕರನ್ನು 6 ರಿಂದ 8ನೇ ತರಗತಿಗೆ ನೇಮಿಕಿಸಿಕೊಳ್ಳಬೇಕು ಎನ್ನುವ ಕೂಗು ಕೇಳಿ ಬಂದಿದೆ. ಇದರ ಬೆನ್ನಲ್ಲೇ, ಶಿಕ್ಷಣ ಇಲಾಖೆಯು ಶಿಕ್ಷಕರ ಬಡ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.
PublicNext
15/12/2021 09:12 pm